ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​

Ravi Talawar
ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​
WhatsApp Group Join Now
Telegram Group Join Now

ಚಿಕ್ಕಮಗಳೂರು, ಸೆಪ್ಟೆಂಬರ್​ 10: ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ  ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

 

WhatsApp Group Join Now
Telegram Group Join Now
Share This Article