ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ

Ravi Talawar
ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​​ 27: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ  ನಟ ದರ್ಶನ್​ಗೆ  ಚಹಾ ಮತ್ತು ಸಿಗರೇಟ್​​ ನೀಡಿರುವ ಫೋಟೋ ಬಹಿರಂಗಗೊಂಡಿದೆ. ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್​ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.

ಎರಡನೇ ಪ್ರಕರಣ: ಮೊಬೈಲ್ ಫೋನ್​ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಫೋಟೋ ತೆಗೆದಿದ್ದು ಹಾಗೂ ವಿಡಿಯೋ ಕರೆ ಮಾಡಿದ್ದು ಯಾರು? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು ಹೇಗೆ.? ಒದಗಿಸಿದವರು ಯಾರು, ನೆಟ್ ಕನೆಕ್ಷನ್ ಹೇಗೆ ಬಂತು ಎಂಬೆಲ್ಲ ತನಿಖೆ ನಡಯುತ್ತದೆ. ಹೊರಗಡೆಯಿಂದ ಜೈಲಿನೊಳಗೆ ವಿಡಿಯೋ ಕರೆ ಮಾಡಿರುವ ಬಗ್ಗೆಯೂ ತನಿಖೆ ನಡೆಯಲಿದೆ.

WhatsApp Group Join Now
Telegram Group Join Now
Share This Article