ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಾನೂನು ಹೋರಾಟದ ಎಚ್ಚರಿಕೆ

Ravi Talawar
ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಾನೂನು ಹೋರಾಟದ ಎಚ್ಚರಿಕೆ
WhatsApp Group Join Now
Telegram Group Join Now

ಮೈಸೂರು, ಮೇ 22: ನಾನು ಸಂಸದ ಪ್ರಜ್ವಲ್ ರೇವಣ್ಣ  ಪರವಾಗಿ ಇಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ. ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್  ಪೆನ್​ಡ್ರೈವ್ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನವಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್ ಸಹ ಇದ್ದಾನೆ? ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್ ಬಂಧನ ತೋರಿಸಿಲ್ಲ? ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ ಹೇಳಿ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ  ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ಕೊಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರಕಾರದ ಕೆಲಸ ಆಗಿದೆ. ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೆ ಎಂದು ವಾಗ್ದಾಳಿ ಮಾಡಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರೇ, ಬಹಳಷ್ಟು ಭಯೋತ್ಪಾದಕರು ಅವರ ಸುತ್ತಮುತ್ತ ಇದ್ದಾರೆ. ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ? ವಿಡಿಯೋ ಮಾಡಿರುವುದು ಒಂದು ಭಾಗ. ವಿಡಿಯೋವನ್ನು ಚುನಾವಣೆಗಾಗಿ ವಿತರಿಸಿದ್ದು ಅಪರಾಧ ಅಲ್ವಾ? ವಿಡಿಯೋ ಮಾಡಿದ್ದಕ್ಕಿಂತ ಅದನ್ನು ಹಂಚಿದ್ದು ಹೆಚ್ಚು ಅಪರಾಧ ಅಲ್ವಾ? ಎಂದು ಪ್ರಶ್ನಿಸಿದರು.

 

WhatsApp Group Join Now
Telegram Group Join Now
Share This Article