ವಾಲ್ಮೀಕಿ ನಿಗಮ ಅಕ್ರಮ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ: ಜುಲೈ 18ರವರೆಗೂ ಇಡಿ ವಶಕ್ಕೆ

Ravi Talawar
ವಾಲ್ಮೀಕಿ ನಿಗಮ ಅಕ್ರಮ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ: ಜುಲೈ 18ರವರೆಗೂ ಇಡಿ ವಶಕ್ಕೆ
WhatsApp Group Join Now
Telegram Group Join Now

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಜುಲೈ 18ರವರೆಗೂ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಶುಕ್ರವಾರ ಮುಂಜಾನೆ ಡಾಲರ್ಸ್ ಕಾಲೊನಿಯಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಅವರನ್ನು ವಶಕ್ಕೆ ಪಡೆದಿದ್ದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ತಡರಾತ್ರಿ ನಾಗೇಂದ್ರ ಅವರನ್ನು ಕಚೇರಿಯಲ್ಲಿರಿಸಿಕೊಂಡ ಅಧಿಕಾರಿಗಳು ಇಂದು ಮುಂಜಾನೆ ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ನಂತರ ಸಂಪಿಗೆಹಳ್ಳಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಈ ವೇಳೆ, ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು 14 ದಿನಗಳ ಕಾಲ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಮನವಿ ಸಲ್ಲಿಸಿದರು. ಆದರೆ ನ್ಯಾಯಾಧೀಶರು ಜುಲೈ 18ರವರೆಗೆ ನಾಗೇಂದ್ರ ಅವರನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

 ಇನ್ನು ಕಸ್ಟಡಿಗೆ ಪಡೆದ ಬಳಿಕ ಶಾಂತಿನಗರದ ಇಡಿ ಕಚೇರಿ ಬಳಿ ಕರೆತಂದಾಗ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಬಿ. ನಾಗೇಂದ್ರ, “ನಿಗಮದಲ್ಲಿನ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ, ಇ.ಡಿ ಅಧಿಕಾರಿಗಳು ನನ್ನನ್ನು ಯಾಕೆ ಬಂಧಿಸಿದ್ದಾರೆ ಎಂದು ಗೊತ್ತಿಲ್ಲ. ತನಗೂ ವಾಲ್ಮೀಕಿ ನಿಗಮದ ಅಕ್ರಮಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Share This Article