ವಾಲ್ಮೀಕಿ ನಿಗಮ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್ 3 ತನಕ ನ್ಯಾಯಾಂಗ ಬಂಧನ

Ravi Talawar
ವಾಲ್ಮೀಕಿ ನಿಗಮ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರಗೆ  ಆಗಸ್ಟ್ 3 ತನಕ ನ್ಯಾಯಾಂಗ ಬಂಧನ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 22: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್​​ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ರವಿವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.

WhatsApp Group Join Now
Telegram Group Join Now
Share This Article