ಬಳ್ಳಾರಿ ;12..ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಮುಖಂಡರು ನಿರಂತರವಾಗಿ ಶ್ರಮಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾದ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆಯುತ್ತಿದೆ. ಆದರೆ, ಪ್ರತಿಪಕ್ಷದ ಮುಖಂಡರು ಇಲ್ಲಸಲ್ಲದ ಬಣ್ಣಕಟ್ಟಿ ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಅವರ ಹೀನಾಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಎಐಸಿಸಿಯು ಜಿಲ್ಲಾ, ತಾಲೂಕು, ಬೂತ್ ಹಾಗೂ ಗ್ರಾಪಂ ಮಟ್ಟದಲ್ಲಿ ಪ್ರಚಾರ ಸಮಿತಿಗಳನ್ನು ರಚಿಸಲು ಅನುಮೋದನೆ ಕೊಟ್ಟಿದೆ. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಇದೀಗ ೨೨ನೇ ಜಿಲ್ಲೆಯಾಗಿದೆ. ಪ್ರಚಾರ ಸಮಿತಿ ರಚನೆಯ ಉದ್ದೇಶ ಸರಕಾರದ ಯೋಜನೆಗಳು ಹಾಗೂ ಅಭಿವೃದ್ಧಿಯ ಕೆಲಸಗಳನ್ನು ಗ್ರಾಮದ ಪ್ರತಿಯೊಬ್ಬ ಜನರಿಗೆ ತಲುಪಿಸುವುದಾಗಿದೆ. ಜಿಲ್ಲಾ ಪ್ರಚಾರ ಸಮಿತಿಯಲ್ಲಿ 23 ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಸಮಿತಿಯಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗುವುದು. ಸಮಿತಿ ರಚನೆಯ ಕಾರ್ಯ ಪೂರ್ಣಗೊಂಡ ಬಳಿಕ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು. ಎಂದು ತಿಳಿಸಿದರು.
ಡಿಸೆಂಬರ್‌ನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವು ಸಾಧ್ಯತೆಗಳಿವೆ. ನಮ್ಮ ಸರಕಾರ ಮಾಡಿ ಅಭಿವೃದ್ಧಿ ಯೋಜನೆಗಳನ್ನು ಪ್ರಚಾರ ಮಾಡಬೇಕಾಗಿದೆ. ನಾವು ಶೇ.95 ರಷ್ಟು ಕೆಲಸ ಮಾಡಿ, ಶೇ.5ರಷ್ಟು ಪ್ರಚಾರ ನೀಡುತ್ತಿದ್ದೇವೆ. ಆದರೆ ವಿರೋ‘ ಪಕ್ಷದವರು ಶೇ.5 ರಷ್ಟು ಕೆಲಸ ಮಾಡಿ, ಶೇ.95 ರಷ್ಟು ಪ್ರಚಾರ ಮಾಡುತ್ತಿದ್ದಾರೆ. ಮತಗಳ್ಳವು ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾದ್ಯಕ್ಷ ಅಲ್ಲಂ ಪ್ರಶಾಂತ್, ಪಕ್ಷದ ಮುಖಂಡರಾದ ವೆಂಕಟೇಶ್ ಹೆಗಡೆ, ಮುಂಡರಗಿ ನಾಗರಾಜ್, ಎಲ್.ಮಾರೆಣ್ಣ, ಮಂಜುನಾಥ್, ಆನಂದ್ ಕುಮಾರ್ ಸೇರಿದಂತೆ ಇತರರಿದ್ದರು.