ಲಕ್ಷ್ಮೀ ಹೆಬ್ಬಾಳ್ಕರ್ ನನ್ನ ಹತ್ಯೆಗೆ ಯತ್ನಿಸಿದ್ದಾರೆ: ಮಾಜಿ ಶಾಸಕ ಸಂಜಯ್ ಪಾಟೀಲ್ ದೂರು

Ravi Talawar
ಲಕ್ಷ್ಮೀ ಹೆಬ್ಬಾಳ್ಕರ್ ನನ್ನ ಹತ್ಯೆಗೆ ಯತ್ನಿಸಿದ್ದಾರೆ: ಮಾಜಿ ಶಾಸಕ ಸಂಜಯ್ ಪಾಟೀಲ್ ದೂರು
WhatsApp Group Join Now
Telegram Group Join Now

ಬೆಳಗಾವಿ, ಏಪ್ರಿಲ್​ 15: ನೂರಕ್ಕೂ ಹೆಚ್ಚು ಗೂಂಡಾಗಳ ಮೂಲಕ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಂಬಲಿಗರ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅವಾಚ್ಛ ಶಬ್ಧಗಳಿಂದ ನಿಂದಿಸಿದ್ದು, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಗಾಜಿನ ಬಾಟಲ್​, ಕಲ್ಲುಗಳನ್ನು ಹಿಡಿದು ಮನೆಯೊಳಗೆ ನುಗ್ಗಲು ಯತ್ನಿಸಿದ್ದು, ಬೆಲೆಬಾಳುವ ವಸ್ತುಗಳನ್ನು ನಾಶ ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಇದಕ್ಕೆಲ್ಲ ನೇರವಾಗಿ ಅವರೇ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಸಿಬ್ಬಂದಿ ಮೇಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಪ್ರಚೋದನೆ ನೀಡಿದವರು ಮತ್ತು ನನ್ನ ಕೊಲೆಗೆ ಯತ್ನಿಸಿದವರು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಯಿಷಾ ಸನದಿ, ಸುಜಯ್ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ, ರೋಹಿಣಿಬಾಬ್ಟೆ, ಮುಷ್ತಾಕ್ ಮುಲ್ಲಾ, ಸದ್ದಾಂ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ್, ಭಾರತಿ ಸೇರಿ ನೂರಕ್ಕೂ ಅಧಿಕ ಜನರ ಮೇಲೆ ಕ್ರಮ ಕೈಗೊಳ್ಳುವಂತೆ ಸಂಜಯ್ ಪಾಟೀಲ್ ದೂರು ನೀಡಿದ್ದಾರೆ.

WhatsApp Group Join Now
Telegram Group Join Now
Share This Article