ಬೆಂಗಳೂರು, ಅಕ್ಟೋಬರ್ 31: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ ದೂರು ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಸಂತ್ರಸ್ತೆ 2022ನೇ ಸಾಲಿನ ನವೆಂಬರ್ ತಿಂಗಳಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊಫೇಸರ್ ಶ್ರೀ.ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಲಸಕ್ಕೆ ಸೇರಿದ್ದರು. ಆಗಿನಿಂದ 2 ವರ್ಷ ಅಲ್ಲಿಯೇ ಕೆಲಸ ಮಾಡಿದ್ದರು.
ಈ ವೇಳೆ ಆಕೆಯ ಪತಿಯೂ ಅಸಹಜವಾಗಿ ಸಾವನ್ನಪ್ಪಿದ್ದರು. ಈ ವೇಳೆ ಪತಿಯ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ದೂರನ್ನೂ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಸಂತ್ರಸ್ತೆಯ ಹೆಸರಿನಲ್ಲಿದ್ದ ಆಸ್ತಿಯನ್ನು ತಮಗೆ ಬರೆದುಕೊಡುವಂತೆ ಪೀಡಿಸಿದ್ದರು. ಈ ಸಮಯದಲ್ಲಿ ಬಿ.ಸಿ.ಮೈಲಾರಪ್ಪಆಕೆಯ ಗಂಡನ ಸಾವಿನ ಬಗ್ಗೆ ಮಹಾಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆಯ ಪರ ವಾದಿಸಿ, ಸಾಕಷ್ಟು ಓಡಾಟ ನಡೆಸಿದ್ದರು.

 
		 
		 
		
