ಹೈದರಾಬಾದ್: ಉಸ್ಮಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡದಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, “ಮೃತರನ್ನು ಖಾಸಗಿ ಉದ್ಯೋಗಿಯಾಗಿದ್ದ ಚಂದ್ರಶೇಖರ್ ರೆಡ್ಡಿ, ಅವರ ಪತ್ನಿ ಕವಿತಾ ಮತ್ತು ಅವರ ಮಕ್ಕಳಾದ ಶ್ರಿತ ರೆಡ್ಡಿ(9 ನೇ ತರಗತಿ) ಮತ್ತು ವಿಶ್ವನ್ ರೆಡ್ಡಿ(5 ನೇ ತರಗತಿ) ಎಂದು ಗುರುತಿಸಲಾಗಿದೆ.
ನಾಲ್ವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.