ಬೆಂಗಳೂರು: ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.
ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.
ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.