ಬಳ್ಳಾರಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ: 200ಕ್ಕೂ ಹೆಚ್ಚು ಮಹಿಳೆಯರಿಗೆ ಸೇವೆ

MK HasiruKranti
ಬಳ್ಳಾರಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ: 200ಕ್ಕೂ ಹೆಚ್ಚು ಮಹಿಳೆಯರಿಗೆ ಸೇವೆ
WhatsApp Group Join Now
Telegram Group Join Now
ಬಳ್ಳಾರಿ: 27..Campಸ್ನೇಹ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ನಗರದ ಗ್ರಂಥಾಲಯ ಕಚೇರಿ ಆವರಣದಲ್ಲಿರುವ ಹೊಂಗಿರಣ ಸಭಾಂಗಣದಲ್ಲಿ ಇಂದು (ಮಾ.25) ಉಚಿತ ಕ್ಯಾನ್ಸರ್ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.
ಬೆಳಿಗ್ಗೆ 9.30ರಿಂದ ಸಂಜೆ 7.30ರವರೆಗೆ ನಡೆದ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ತಪಾಸಣೆ ನಡೆಸಲಾಯಿತು. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಿಂದ ನುರಿತ ವೈದ್ಯರನ್ನು ಕರೆಸಿ ತಪಾಸಣೆ ಮಾಡಲಾಗಿದ್ದು, ಮಹಿಳೆಯರಿಗೆ ಅಗತ್ಯ ಸಲಹೆ ಹಾಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಹ್ಯಾರಿಸ್ (ಐಎಎಸ್), ಜಿಲ್ಲಾ ಪೊಲೀಸ್ ಅಧಿಕಾರಿ ಮಹಮ್ಮದ್ ಸುಬೇರ್, ಅಪರ ಜಿಲ್ಲಾಧಿಕಾರಿ ನದೀಮುಲ್ಲಾ, ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ಮಹಂತೇಶ್, ಡಾ. ಬಸವರಡ್ಡಿ, ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಡಾ. ರಮೇಶ್, ಡಿಎಚ್ಓ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿನಿಧಿಗಳು, ಮೈತ್ರಿ ಬಿಶ್ವಾಸ್ (ಮುಖ್ಯ ಅತಿಥಿ, ಬೆಂಗಳೂರು), ಸ್ನೇಹ ಆಫೀಸರ್ಸ್ ಲೇಡೀಸ್ ಕ್ಲಬ್ ಅಧ್ಯಕ್ಷೆ ಶಾಯಿನ್ ಜುಬೇರ್, ಕಾರ್ಯದರ್ಶಿ ಶ್ರೀದೇವಿ ರಾವ್ ಹಾಗೂ ಕ್ಲಬ್‌ನ ಸದಸ್ಯರು ಭಾಗವಹಿಸಿದ್ದರು.
ಶಿಬಿರದ ಮೂಲಕ ಗ್ರಾಮೀಣ ಹಾಗೂ ಬಡ ವರ್ಗದ ಮಹಿಳೆಯರಿಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ತ್ವರಿತ ಪತ್ತೆ ಮತ್ತು ಚಿಕಿತ್ಸೆಗೆ ನೆರವಾಗುವ ಪ್ರಯತ್ನ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article