ಬಳ್ಳಾರಿ,ಮಾ.13:.: ಪ್ರತಿವರ್ಷ ಪದ್ದತಿಯಂತೆ ಶ್ರೀ ಪೊಂಪಯ್ಯತಾತವರ ೩೪ನೇ ಪುಣ್ಯ ಸ್ಮರಣೆ ಅಂಗವಾಗಿ ಶ್ರೀ ಪೊಂಪಯ್ಯತಾತ ಸೇವಾ ಟ್ರಸ್ಟ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸಿರುಗುಪ್ಪ ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ರಾರಾವಿ ಹಾಗೂ ವೈದೇಹಿ ಆಸ್ಪತ್ರೆ, ಬೆಂಗಳೂರು ಇವರ ಸಂಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಸಿರುಗುಪ್ಪ  ಪಿ.ಎಲ್.ಡಿ ಬ್ಯಾಂಕ್ ಚೊಕ್ಕ ಬಸವನಗೌಡ, ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತಿರುವುದು ಪುಣ್ಯದ ಕೆಲಸ ಇತ್ತೀಚಿನ ದಿನಮಾನಗಳಲ್ಲಿ ವೈದ್ಯಕೀಯ ವೆಚ್ಚವು ಹೆಚ್ಚಾಗಿದ್ದು, ಸಾರ್ವಜನಿಕರು ಇದರಲ್ಲಿ ಭಾಗವಹಿಸುವುದರ ಮೂಲಕ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಪೂಜ್ಯರ ಪುಣ್ಯಸ್ಮರಣೆ ಅಂಗವಾಗಿ ಆರೋಗ್ಯ ಶಿಬಿರ ಅಯೋಜಿಸಿರುವುದು ಪುಣ್ಯದ ಕೆಲಸ ಎಂದರು,
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಡ್ರಾಳ್ ಎಂ.ಮೃತ್ಯುAಜಯಸ್ವಾಮಿ ಮಾತನಾಡಿ, ಶ್ರೀ ಪೊಂಪಯ್ಯತಾತನವರ ಪುಣ್ಯಸ್ಮರಣೆ ಅಂಗವಾಗಿ ಪ್ರತಿ ವರ್ಷ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತಿದ್ದೇವೆ. ಉಚಿತ ಆರೋಗ್ಯ ಶಿಬಿರಗಳು ಬಡವರಿಗೆ ವರದಾನವಾಗಿದ್ದು, ಇದರಲ್ಲಿ ಭಾಗವಹಿಸುವುದರ ಮೂಲಕ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಿಬಿರದ ಮುಖ್ಯಸ್ಥರಾದ ಕೆ.ಮಲ್ಲಿಕಾರ್ಜುನ ಹಚ್ಚೊಳ್ಳಿ ಮಾತನಾಡಿ, ಶಿಬಿರದಲ್ಲಿ ಭಾಗವಹಿಸುವವರಿಗೆ ಹೃದಯ ಸಂಬAದಿ, ನರರೋಗ ಸಮಸ್ಯೆ, ಕಣ್ಣಿನ ಸಮಸ್ಯೆ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸಮಸ್ಯೆಗೆ ತಪಾಸಣೆಯ ಜೊತೆಗೆ ಉಚಿತ ಔಷಧಗಳನ್ನು ನೀಡುತ್ತೇವೆ ಮತ್ತು ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಶಿವರುದ್ರತಾತನವರು ಮುತ್ತಿಪೆಂಡೆಮಠ ಹಚ್ಚೊಳ್ಳಿ ಸಾನಿಧ್ಯ ವಹಿಸಿದ್ದರು. ಶಿಬಿರದಲ್ಲಿ ಬಂಡ್ರಾಳ್ ಮತ್ತು ಸುತ್ತಮುತ್ತಲಿನ ಹಳ್ಳಿಯ ಸುಮಾರು ೨೫೦ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದರು.  ಕಾರ್ಯಕ್ರಮದಲ್ಲಿ ವೈದೇಹಿ ವೈದರನ್ನು  ಸನ್ಮಾನಿಸಲಾಯಿತು.
2 Attachments  •  Scanned by Gmail