ಹುಬ್ಬಳ್ಳಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣ ಅವರ ಪುಣ್ಯಸ್ಮರಣೆ ನಿಮಿತ್ ಶೌರ್ಯ ಮತ್ತು ಸಾಹಸಕ್ಕೆ ಹೆಸರಾದ ಸಿಂಧೂರ ಲಕ್ಷ್ಮಣ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡುವ ಮೂಲಕ ಗೌರವ ಅರ್ಪಣೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ಅತಿಥಿಗಳು ಸಿಂಧೂರ ಲಕ್ಷ್ಮಣ ಅವರ ಸಾಹಸ, ದೈರ್ಯ, ದಿಟ್ಟತನ, ಮುಂತಾದ ಗುಣಗಳನ್ನು ಮುಕ್ತ ಕಂಠದಿಂದ ಸ್ಮರಿಸಿದರು. ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಜಿ.ಎನ್.ಕುಬಿಹಾಳ, ಡಾ. ಸಿ.ತ್ಯಾಗರಾಜ, ಡಾ. ಬಸವಕುಮಾರ ತಲವಾಯಿ, ಗುರುಮೂರ್ತಿ ಫ..ಬೆಂಗಳೂರ, ಶಶಿಕಾಂತ, ಮುಂತಾದವರು ಇದ್ದರು.