ತ್ಯಾಗ, ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ: ಸಚಿವ ರಹೀಂ ಖಾನ್

Ravi Talawar
ತ್ಯಾಗ, ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ:  ಸಚಿವ ರಹೀಂ ಖಾನ್
WhatsApp Group Join Now
Telegram Group Join Now
ಬಳ್ಳಾರಿ,ಆ.15. ದೇಶಕ್ಕೆ ಸ್ವಾತಂತ್ರ ತಂದುಕೊಟ್ಟಂತಹ ಅನೇಕ ಮಹಾನ್ ಹೋರಾಟಗಾರರ, ವೀರ ಯೋಧರ ಸ್ಮರಣೆ ಎಲ್ಲರ ಆದ್ಯ ಕರ್ತವ್ಯ. ಅವರ ತ್ಯಾಗ, ಬಲಿದಾನಗಳ ಪ್ರತೀಕವೇ ಸ್ವಾತಂತ್ರö್ಯ ಆಗಿದೆ ಎಂದು ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಹೇಳಿದರು.
ಜಿಲ್ಲಾಡಳಿತದಿಂದ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 79ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿ, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ, ಬಳಿಕ ಧ್ವಜಾರೋಹಣಾ ಸಂದೇಶ ನೀಡಿ ಅವರು ಮಾತನಾಡಿದರು.
ಭಾರತದಂತಹ ವಿಶಾಲವಾದ ರಾಷ್ಟç ವೈವಿಧ್ಯತೆಯ ಮಧ್ಯೆಯೂ ಅದ್ವಿತೀಯವಾದ ಅಖಂಡತೆಯನ್ನು ಉಳಿಸಿಕೊಂಡು ವಿಶ್ವದ ಪ್ರಮುಖ ಅಭಿವೃದ್ದಿ ಶೀಲ ರಾಷ್ಟçವಾಗಿ ಹೊರ ಹೊಮ್ಮುತ್ತಿದೆ. ನಮ್ಮ ದೇಶವು ಹಲವಾರು ಜಾತಿ, ಸಮುದಾಯಗಳಿಂದ ಒಗ್ಗೂಡಿದ ಜಾತ್ಯಾತೀತ ರಾಷ್ಟçವಾಗಿದೆ ಎಂದು ಸಚಿವರು ಬಣ್ಣಿಸಿದರು.
ಸ್ವಾತಂತ್ರö್ಯ ಬಂದ ನಂತರ ದೇಶವು ಅತ್ಯಂತ ಕಠಿಣ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿಕೊಂಡು ಅಭಿವೃದ್ಧಿಯತ್ತ ಪ್ರಯತ್ನ ಸಾಗಿತು. ಎಲ್ಲಾ ಸವಾಲುಗಳ ಮಧ್ಯದಲ್ಲಿಯೂ ಭಾರತ ಬಲಿಷ್ಠ ರಾಷ್ಟçವಾಗಿ ರೂಪಗೊಂಡಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ, ಕೈಗಾರಿಕೆ, ಕೃಷಿ, ಸಾಕ್ಷರತೆ, ತಂತ್ರಜ್ಞಾನ (ಐ.ಟಿ.ಬಿ.ಟಿ), ಆರೋಗ್ಯ, ಗ್ರಾಮಾಂತರ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ, ಬಾಹ್ಯಾಕಾಶ ವಿಜ್ಞಾನ, ಅಣು ವಿಜ್ಞಾನ ಕ್ಷೇತ್ರಗಳಲ್ಲಿ ವಿಶ್ವದ ಗಮನ ಸೆಳೆಯುವಂತಹ ಪ್ರಗತಿ ಸಾಧಿಸಲಾಗಿದೆ ಎಂದು ದೇಶಾಭಿಮಾನ ಬಿಂಬಿಸಿದರು.
ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟçವಾಗಿದೆ. ದೇಶದಲ್ಲಿ ಸ್ವಾತಂತ್ರö್ಯ, ಸಮಾನತೆ, ಭ್ರಾತೃತ್ವ ಭಾವನೆಗಳು ಇವೆ ಎಂದರೆ ಅದು ಸಂವಿಧಾನ ನಮಗೆ ನೀಡಿರುವ ಕೊಡುಗೆಯಾಗಿದೆ ಎಂದರು.
ಈ ಹಿಂದೆ ರಾಜನ ಮಗ ರಾಜ ಆಗುತ್ತಿದ್ದನು. ಆದರೆ ಸಂವಿಧಾನ ಜಾರಿಗೆ ಬಂದ ನಂತರ ಬಡ, ಮಧ್ಯಮ ಸೇರಿದಂತೆ ಪ್ರತಿಯೊಬ್ಬರೂ ದೇಶ ಆಳುವ ನಾಯಕನಾಗುವ ಅವಕಾಶ ಕಲ್ಪಿಸಿಕೊಟ್ಟಿದೆ. ಇದರಿಂದ ಸರ್ಕಾರ ರಚಿಸುವ ಮೂಲಕ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಇದರಿಂದ ಪಡೆದುಕೊಳ್ಳಬಹುದಾಗಿದೆ. ನಮ್ಮ ಸರ್ಕಾರವು ಬಡವರು, ರೈತರ ಪರವಾಗಿದೆ. ಎಲ್ಲರಿಗೂ ಸಮಾನತೆ ಕಲ್ಪಿಸಿದೆ ಎಂದು ಸಚಿವರು ನುಡಿದರು.
ಪ್ರಪಂಚದಲ್ಲಿಯೇ ಅತ್ಯಂತ ಜೀವಂತವೆನಿಸಿದ ಹಾಗೂ ಅತೀ ದೊಡ್ಡದಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶವು ನಡೆಸಿಕೊಂಡು ಬಂದಿದೆ. ಇದಕ್ಕಾಗಿ ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದು ಅವರು ಹೇಳಿದರು.
ಸ್ವಾತಂತ್ರೊö್ಯÃತ್ಸವನ್ನು ಕೇವಲ ಸಂಭ್ರಮಿಸಿದರೆ ಸಾಲದು ದೇಶದ ಪ್ರಗತಿಗೆ ತನು, ಮನ, ಧನ, ಸಮರ್ಪಣ ಮನೋಭಾವದಿಂದ ದೇಶದ ರಕ್ಷಣೆಗೆ ಕಂಕಣ ಬದ್ದರಾಗಬೇಕಾಗಿದೆ. ದಾಸ್ಯ, ಮೌಢ್ಯವನ್ನು, ಅಳಿಸಿ ಹಾಕಿ ಆಧುನಿಕ ಭಾರತ, ವೈಜ್ಞಾನಿಕ ಭಾರತ, ಸಮೃದ್ದಿ ಭಾರತವನ್ನು ಕಟ್ಟಬೇಕಾಗಿದೆ ಎಂದು ಕರೆ ನೀಡಿದರು.
*ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ:*
ಸ್ವಾತಂತ್ರö್ಯ ಹೋರಾಟದಲ್ಲಿ ಕರ್ನಾಟಕದ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಮಹತ್ತರ ಕಾಣಿಕೆ ನೀಡಿದೆ. ಬಳ್ಳಾರಿ ಜಿಲ್ಲೆಯ ಸ್ವಾತಂತ್ರö್ಯ ಹೋರಾಟವು ರಾಷ್ಟಿçÃಯ ಭಾವೈಕ್ಯತೆಯ ಸಂಕೇತವಾಗಿತ್ತು. ಭಾಷಾ ಭೇದವನ್ನು ಮರೆತು, ಸ್ವಾತಂತ್ರö್ಯ ಹೋರಾಟದಲ್ಲಿ ಧುಮುಕಿದ ಜಿಲ್ಲೆಯ ಅನೇಕ ಹೋರಾಟಗಾರರನ್ನು ನೆನೆಯಬೇಕು ಎಂದರು.
ಸ್ವಾತAತ್ರö್ಯ ಚಳುವಳಿಯಲ್ಲಿ ಮಹಾತ್ಮ ಗಾಂಧೀಜಿಯವರು ಅಹಿಂಸವಾದ ಮೂಲಕ ಜನರಲ್ಲಿ ಮೂಡಿಸಿ ಜಾಗೃತಿಗೊಳಿಸಲು ಸಮರ್ಪಣ ಮನೋಭಾವದಿಂದ ಭಾಗವಹಿಸಲು ಬಳ್ಳಾರಿಗೆ ಆಗಮಿಸಿ ತಂಗಿದ್ದರು ಎನ್ನುವುದು ರೋಚಕದ ಸಂಗತಿಯಾಗಿದೆ ಎಂದು ಸ್ಮರಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮಾನತೆಯನ್ನು ತಲುಪಿಸಬೇಕು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ ವಿಶ್ವ ಹೋರಾಟದ ಇತಿಹಾಸದಲ್ಲೊಂದು ಮೈಲುಗಲ್ಲು ಆಗಿದೆ. ನಮ್ಮ ಸರ್ಕಾರವು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೇ ಬಡವರಿಗೆ, ಜನ ಸಾಮಾನ್ಯರಿಗೆ ಯಶಸ್ವಿಯಾಗಿ ತಲುಪಿಸಿದ್ದೇವೆ. ಸಾಕಷ್ಟು ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.
ನಗರಗಳ ಸಮಗ್ರ ಅಭಿವೃದ್ಧಿಗೆ ಸಂಬAಧಿಸಿದAತೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ್ ಮಿಷನ್, ಅಮೃತ 2.0 ಯೋಜನೆ ಮತ್ತು 15ನೇ ಹಣಕಾಸು ಯೋಜನೆಗಳ ಮೂಲಕ ಪ್ರಗತಿ ಸಾಧಿಸಲಾಗಿದೆ. ನಮ್ಮ ಸರ್ಕಾರ ಕೂಲಿ ಕಾರ್ಮಿಕರ, ರೈತರ, ಬಡಜನರ, ಬಡವಿದ್ಯಾರ್ಥಿಗಳ ಹಸಿವು ನೀಗಿಸಲು ಹೆಚ್ಚುವರಿ 200 ಇಂದಿರಾ ಕ್ಯಾಂಟಿನ್‌ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ರಹೀಂ ಖಾನ್ ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ನಿಂದ ಸಾಕಷ್ಟು ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಸರ್ಕಾರವು ಈ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿಯೇ ಸಾಕಷ್ಟು ವಿಶೇಷ ಅನುದಾನ ನೀಡುತ್ತಿದೆ. ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದ್ಬಳಕೆಯಾಗಬೇಕು ಎಂದರು.
ರಾಷ್ಟಿçÃಯ ಐಕ್ಯತೆಗೆ, ರಾಷ್ಟçದ ರಕ್ಷಣೆಗೆ ಹಾಗೂ ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನೊಳಗೊಂಡ 31 ತುಕಡಿಗಳಿಂದ ಶಿಸ್ತುಬದ್ಧ ಆಕರ್ಷಕ ಪಥಸಂಚಲನ ನಡೆಯಿತು.  ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಬಳಿಕ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರೊö್ಯÃತ್ಸವದ ನಿಮಿತ್ತ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ಗಾಯನ ಮತ್ತು ವೇಷಧಾರಿಗಳಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article