ಬೆಂಗಳೂರು, ಏಪ್ರಿಲ್ 22: ಪ್ರತಿಪಕ್ಷಕ್ಕೆ ಅಸ್ತ್ರವಾಗಿರುವ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಂಡವಾಗಿರುವ ಜಾತಿಗಣತಿಯ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. 2015 ರ ಸಮೀಕ್ಷೆಯಲ್ಲಿ ಈಗಾಗಲೇ ಜನಸಂಖ್ಯೆಗಳ ಲೆಕ್ಕಾಚಾರ ಬಯಲಾಗಿದೆ. ಇದೀಗ ಯಾವ್ಯಾವ ಸಮುದಾಯ ಎಷ್ಟೆಷ್ಟು ಹೆಚ್ಚಾಗಿದೆ ಎಂಬ ಸಂಗತಿಯೂ ಬಯಲಾಗಿದೆ. ಅದರಲ್ಲಿಯೂ, 30 ವರ್ಷಗಳಲ್ಲಿ ಮುಸ್ಲಿಮರ ಜನಸಂಖ್ಯೆ ಶೇ 90ರಷ್ಟು ಏರಿಕೆಯಾಗಿರುವ ಅಂಶ ಸೋರಿಕೆಯಾಗಿದೆ.
1984ರಲ್ಲಿ ಇಡೀ ರಾಜ್ಯದಲ್ಲಿ ಶೇಕಡಾ 17ರಷ್ಟು ಜನಸಂಖ್ಯೆ ಹೊಂದಿದ್ದ ಲಿಂಗಾಯತರು ಈಗ ಮೂರನೇ ಸ್ಥಾನಕ್ಕೆ ಕುಸಿದಿರುವುದಾಗಿ ಈಗ ಮಂಡನೆಯಾದ ವರದಿಯಲ್ಲಿ ತಿಳಿಸಲಾಗಿದೆ. ಲಿಂಗಾಯತರಿಗೆ ಮೂರನೇ ಸ್ಥಾ ನೀಡಿ ಮುಸ್ಲಿಮರಿಗೆ 2ನೇ ಸ್ಥಾನ, ಪರಿಶಿಷ್ಟ ಜಾತಿಗಳು ಅತಿದೊಡ್ಡ ವರ್ಗ ಎಂದು ವರದಿ ನೀಡಿದ್ದಾರೆ. ಆದರೆ ಈಗ ಉಳಿದ ಸಮುದಾಯಗಳು ನಿಧಾನಗತಿಯಲ್ಲಿ ಏರಿಕೆ ಕಂಡಿದ್ದರೂ, ಮುಸ್ಲಿಮರ ಜನಸಂಖ್ಯೆ ಏಕಾಏಕಿ 30 ವರ್ಷದಲ್ಲಿ ಶೇಕಡಾ 90ರಷ್ಟು ಬೆಳವಣಿಗೆ ಆಗಿದ್ಹೇಗೆ ಎಂಬುದೇ ಪ್ರಶ್ನೆಯಾಗಿದೆ.