ಗದಗ ಜೂನ್ 13: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಟಾನ ಪರಿಣಾಮಕಾರಿಯಾಗಿ ಮಾಡಬೆಕು. ನಿಗದಿಪಡಿಸಿದ ಗುರಿಗೂ ಅಧಿಕ ಸಾಧನೆ ಇಲಾಖೆ ಅಧಿಕಾರಿಗಳಿಂದ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ತಿಳಿಸಿದರು.
ಗುರುವಾರ ನಗರದ ಜಿಲ್ಲಾಡಳಿತ ಭವನದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಲು ಸಾಕಷ್ಟು ವಿಫುಲ ಅವಕಾಶ ಒದಗಿಸಲಾಗಿದೆ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಇರುವ ರಿಯಾಯತಿ ಸೌಲಭ್ಯಗಳನ್ನು ಹಾಗೂ ಸಹಾಯಧನವನ್ನು ಸರಿಯಾಗಿ ತಲುಪಿಸಬೆಕು. ನರೇಗಾ ಯೋಜನೆಯಡಿ ತೋಟಗಾರಿಕೆ ಮಾಡುವವರಿಗೆ ಪ್ರೋತ್ಸಾಹ ನೀಡುವ ಮೂಲಕ ರೈತರನ್ನು ಸ್ವಾವಲಂಬಿಗಳಾಗಿಸುವಲ್ಲಿ ಇಲಾಖೆಯ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಅದೇ ತರಹ ಕೃಷಿ ಇಲಾಖೆ, ರೇಶ್ಮೆ ಇಲಾಖೆ, ಮೀನುಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳೂ ಸಹ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಟಾನದಲ್ಲಿ ವಿಳಂಬ ಮಾಡದೇ ಗುರಿಗೂ ಅಧಿಕ ಸಾಧನೆ ಮಾಡುವಂತೆ ಸೂಚಿಸಿದ ಅವರು ನರೇಗಾ ಕಾಮಗಾರಿಗಳನ್ನು ಸಂಪೂರ್ಣ ಸದ್ಭಳಕೆ ಮಾಡಿಕೊಂಡು ದುಡಿಯುವ ಕೈಗಳಿಗೆ ಕೆಲಸ ನೀಡಿ ಕಾರ್ಮಿಕ ವರ್ಗದ ಆರ್ಥಿಕಾಭಿವೃದ್ಧಿ ಸಾದಿಸುವುದರೊಂದಿಗೆ ಸ್ವಯಂ ಉದ್ಯೋಗಕ್ಕೂ ಇಲಾಖೆಯ ಯೋಜನೆಗಳು ಪೂರಕವಾಗಿವೆ . ಅವುಗಳನ್ನು ಅರ್ಹರೆಲ್ಲರಿಗೂ ತಲುಪಿಸುವ ಕಾರ್ಯ ಇಲಾಖಾ ಅಧಿಕಾರಿಗಳ ಕರ್ತವ್ಯವೆಂದರು.
ಜಿಲ್ಲಾ ಪಂಚಾಯತ್‍ದೊಂದಿಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಕ್ರಿಯಾ ಯೋಜನೆ ತಯಾರಿಯಿಂದ ಹಿಡಿದು ಕಾಮಗಾರಿ ಅನುಷ್ಟಾನದವರೆಗೂ ಒಟ್ಟುಗೂಡಿ ಕೆಲಸ ನಿರ್ವಹಿಸಬೇಕು. ವಿನಾಕಾರಣ ಬೇರೆ ಇಲಾಖೆಗಳನ್ನು ದೂಷಿಸದೇ ಸಮನ್ವಯದಿಂದ ಕೆಲಸ ನಿರ್ವಹಿಸುವಲ್ಲಿ ಆದ್ಯತೆ ವಹಿಸಬೇಕು ಎಂದರು.
ಮುಂಗಾರು ಹಂಗಾಮು ಆರಂಭವಾಗಿದ್ದು ರೈತಬಾಂಧವರಿಗೆ ಬಿತ್ತನೆಗೆ ಅಗತ್ಯವಿರುವ ರಸಗೊಬ್ಬರ , ಬೀಜಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು. ಅದೇ ತರಹ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಟಾನದಲ್ಲಿಯೂ ಆಸಕ್ತಿಯಿಂದ ಕೆಲಸ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.