ಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ

MK HasiruKranti
ಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
WhatsApp Group Join Now
Telegram Group Join Now
ಬಳ್ಳಾರಿ,ಏ.19
ಜಿಲ್ಲೆಯ ಆರೋಗ್ಯ ಸುಧಾರಣೆ ಮತ್ತು ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವೈದ್ಯಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಸೂಚಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ವೈದ್ಯಾಧಿಕಾರಿಗಳ ಜಿಲ್ಲಾ ಮಟ್ಟದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
*ಕ್ಷಯರೋಗ ನಿರ್ಮೂಲನೆಗೆ ಆದ್ಯತೆ:*
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕ್ಷಯರೋಗದ ಲಕ್ಷಣಗಳು ಕಂಡುಬAದ ತಕ್ಷಣವೇ ಕಫ ಪರೀಕ್ಷೆ ಮಾಡಿಸಬೇಕು. ಬೇಗ ಪತ್ತೆ ಹಚ್ಚುವುದು, ಸಂಪೂರ್ಣ ಚಿಕಿತ್ಸೆ ನೀಡುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಲು ಇರುವ ಏಕೈಕ ದಾರಿ ಎಂದು ಅವರು ಅಭಿಪ್ರಾಯಪಟ್ಟರು.
*ತಾಯಿ ಮತ್ತು ಶಿಶು ಮರಣ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ:*
ಗರ್ಭಿಣಿಯರ ಆರೋಗ್ಯದ ಕುರಿತು ವಿಶೇಷ ಗಮನ ಹರಿಸಲು ಸೂಚಿಸಿದ ಸಿಇಒ ಅವರು, ಗರ್ಭಿಣಿಯರನ್ನು ಮೊದಲ ಮೂರು ತಿಂಗಳಲ್ಲೇ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ನಿಯಮಿತ ತಪಾಸಣೆ ಮೂಲಕ ರಕ್ತಹೀನತೆ ಪತ್ತೆ ಹಚ್ಚಿ, ಸುರಕ್ಷಿತ ಹೆರಿಗೆಗೆ ಆದ್ಯತೆ ನೀಡಬೇಕು. ಸಮುದಾಯ, ಪ್ರಾಥಮಿಕ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಗರಿಷ್ಠ ಹೆರಿಗೆಗಳನ್ನು ನಡೆಸುವ ಮೂಲಕ ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಬೇಕು. ತಾಯಿ ಕಾರ್ಡ್ಗಳಲ್ಲಿ ತಪಾಸಣೆಯ ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ತಿಳಿಸಿದರು.
*ಹೆಚ್.ಪಿ.ವಿ ಲಸಿಕೆ ಅಭಿಯಾನ:*
ಜಿಲ್ಲೆಯಲ್ಲಿ ಹೆಚ್.ಪಿ.ವಿ ಲಸಿಕೆ ಪ್ರಗತಿ ಕುಂಠಿತಗೊAಡಿದ್ದು, 14 ವರ್ಷದ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲು ಪೋಷಕರು ಮತ್ತು ಶಿಕ್ಷಕರಿಗೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಸಮುದಾಯ ಸಭೆಗಳನ್ನು ನಡೆಸಿ ಲಸಿಕೆಯ ಮಹತ್ವ ತಿಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸುರಕ್ಷಾ ಅಧಿಕಾರಿಗಳು ಗರ್ಭಿಣಿಯರ ಮನೆಗೆ ಭೇಟಿ ನೀಡಿ ನಿರಂತರ ಸಂಪರ್ಕದಲ್ಲಿರಬೇಕು. ಆಸ್ಪತ್ರೆಗಳಲ್ಲಿನ ಟಿವಿಗಳ ಮೂಲಕ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ಶಾಖಾಘಾತ ಚಿಕಿತ್ಸೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ನಾಯಿ ಮತ್ತು ಹಾವು ಕಡಿತದ ಕುರಿತು ಶಾಲೆ ಹಾಗೂ ಪಂಚಾಯತ್ ಮಟ್ಟದಲ್ಲಿ ನಿರಂತರ ಜಾಗೃತಿ ಮೂಡಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಯೋಜನಾ ಅಭಿವೃದ್ದಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಎಲ್ಲಾ ಆಡಳಿತ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article