ಗದಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಾತಂತ್ಯ ದಿನಾಚರಣೆ ಅಂಗವಾಗಿ ರಾಷ್ಟçಧ್ವಜಾರೋಹಣ ಹಾಗೂ “ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ” ಕಾರ್ಯಕ್ರಮ ಆ. 15ರಂದು ಬೆಳಿಗ್ಗೆ 9ಕ್ಕೆ ಜರುಗಲಿದೆ.
ಅಂದು ಕಾಂಗ್ರೆಸ್ನ ಎಲ್ಲ ಮುಖಂಡರು ರಾಷ್ಟç ಧ್ವಜಗಳನ್ನು ಹಿಡಿದು ಸ್ವಾತಂತ್ರ್ಯ ಸ್ಮಾರಕಗಳವರೆಗೆ “ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ” ಎಂಬ ಘೋಷವಾಕ್ಯಗಳೊಂದಿಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಪಥಸಂಚಲನ ನಡೆಸಲಾಗುವುದು. ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ಮಾಜಿ ಶಾಸಕರಾದ, ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.
ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅದ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೃಷ್ಣಗೌಡ ಎಚ್. ಪಾಟೀಲ ವಿನಂತಿಸಿದ್ದಾರೆ.