ಬೆಳಗಾವಿ.ಜಿಲ್ಲೆಯ ಸವದತ್ತಿ ತಾಲೂಕಿನ ಮಲ್ಲೂರ ಗ್ರಾಮ ಪಂಚಾಯತ 2023-24 ಸಾಲಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗಣನಿಯವಾದ ಸಾಧನೆ ಮಾಡಿರುವುದನ್ನು ಗಮನಿಸಿ ರಾಜ್ಯ ಸರ್ಕಾರವು ಈ ಅನುಪಮ ಸೇವೆಗಾಗಿ ಕರ್ನಾಟಕ ಸರ್ಕಾರವು ಮಲ್ಲೂರ ಗ್ರಾಮ ಪಂಚಾಯತಗೆ ವಿಧಾನ ಸೌಧ ಬೆಂಗಳೂರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಸಚಿವರಾದ ಪ್ರಿಯಾಂಕ ಖರ್ಗೆ ಇವರಿಂದ ನೀಡಲಾಯಿತು. ಈ ಸಾಧನೆಯನ್ನು ಮಾಡಲು ಸಹಕರಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕವಿತಾ ರುದ್ರಗೌಡ ಪಾಟೀಲ ಹಾಗೂ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರ ಸಹಕಾರದಿಂದ ಅಭಿವೃದ್ಧಿ ಮಾಡಲು ಸಹಕಾರ ನೀಡಿದ್ದಕ್ಕಾಗಿ ಗಾಂಧಿ ಪುರಸ್ಕಾರ ಪ್ರಶಸ್ತಿ ದೊರಕಿದೆ ಎಂದು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ವಿಜಯಕುಮಾರ ಬಿ ಅಂಗಡಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.


