ಹೋಟೆಲ್ ಉದ್ಯಮಿ ಜಯ್ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.
ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.