ಕೋಲ್ಕತ್ತಾ, ಏಪ್ರಿಲ್ 1: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡು ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿತು.
ಈ ಕುಟುಂಬವು ವರ್ಷಗಳಿಂದ ಪಟಾಕಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ. ವರದಿಗಳ ಪ್ರಕಾರ, ಒಟ್ಟು 11 ಸದಸ್ಯರು ಮನೆಯಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ 4 ಸದಸ್ಯರು ಇನ್ನೂ ಕಾಣೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.