ಯರಗಟ್ಟಿ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಶಾಂತಿ ಸೌಹಾರ್ದತಿವಾಗಿ ಆಚರಿಸುವಂತೆ ರಾಮದುರ್ಗ ಡಿಎಸ್ಪಿ ಚಿದಂಬರ ಮಡಿವಾಳರ ಸವದತ್ತಿ ಪೊಲೀಸ್ ಠಾಣೆ ಸಿಪಿಐ ಡಿ ಎಸ್ ಧರ್ಮಟ್ಟಿ ಪಿ.ಎಸ್.ಐ ಕಲ್ಮೇಶ್ ಬನ್ನೂರ್ ಹೇಳಿದರು.
ಸಮೀಪದ ಮುನವಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಮುನವಳ್ಳಿ ಪಟ್ಟಣದ ಸುತ್ತಮುತ್ತಲಿನ ಸಾರ್ವಜನಿಕರ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯಾದ ಕೋಮುಗಲಭೆ ಸೃಷ್ಟಿಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು ಇನ್ನೊಬ್ಬರಿಗೆ ಕಿರುಕುಳ ಆಗುವ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು ಗಣೇಶ ಕುರಿಸುವವರು ಸಂಬಂಧಿಸಿದ ಅಧಿಕಾರಿಗಳ ಪರವಾನಿಗೆ
ಪಡೆಯಬೇಕು ಮತ್ತು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.ಈ ಸಂದರ್ಭದಲ್ಲಿ ಪಟ್ಟಣದ ಹಿರಿಯರು ಹಾಗೂ ಯುವಕರು ವಿವಿಧ ಸಂಘಟನೆಯ ಮುಖಂಡರು ಸುತ್ತಮುತ್ತಲಿನ ಹಳ್ಳಿಯ ಗ್ರಾಮಸ್ಥರು ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.