ಗೌರಿಯ ಮೊದಲ ಹಾಡು ಅನಾವರಣ

Ravi Talawar
 ಗೌರಿಯ ಮೊದಲ ಹಾಡು ಅನಾವರಣ
WhatsApp Group Join Now
Telegram Group Join Now
ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಸಮರ್ಜಿತ್ ಲಂಕೇಶ್ ನಾಯಕನಾಗಿರುವ ‘ಗೌರಿ’ ಚಿತ್ರದ ಮೊದಲ ಹಾಡು ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜುನಲ್ಲಿ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ.
  ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ
 ‘ಟೈಮ್ ಬರತ್ತೆ’ ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.
ಇಂದ್ರಜಿತ್ ಲಂಕೇಶ್ ಮಾತನಾಡಿ “ಗೌರಿ’ ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ.
ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು ‘ಗೌರಿ’ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಇಂದು ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ‌.
ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಉಳಿದ ಹಾಡುಗಳು ಅನಾವರಣವಾಗಲಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌” ಎಂದರು.
     “ಗೌರಿ’ ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ” ಎಂದರು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್.

WhatsApp Group Join Now
Telegram Group Join Now
Share This Article