ನವದೆಹಲಿ/ಹುಬ್ಬಳ್ಳಿ, (ಆಗಸ್ಟ್ 13): ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.
ಧಾರವಾಡದಲ್ಲಿ ಕೈಗಾರಿಕರಣಕ್ಕಾಗಿ 28 ಎಕರೆ ವಿಶೇಷ ಆರ್ಥಿಕ ವಲಯಕ್ಕೆ ಗೆಜೆಟ್

ಉತ್ತರ ಕರ್ನಾಟಕ ಭಾಗದಲ್ಲಿ ಎಲೆಕ್ಟ್ರಾನಿಕ್ಸ ಘಟಕಗಳ ಅವಶ್ಯಕತೆಯನ್ನು ಮನಗಂಡು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಚಿವ ಜೋಶಿ ಅವರ ಮನವಿಗೆ ಸ್ಪಂದಿಸಿ SEZ ಘೋಷಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.