ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ಸಾಮಾನ್ಯ ಕೋರಿಕೆ ವರ್ಗಾವಣೆ ಗಣಕೀಕೃತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್

Ravi Talawar
ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ಸಾಮಾನ್ಯ ಕೋರಿಕೆ ವರ್ಗಾವಣೆ ಗಣಕೀಕೃತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್
WhatsApp Group Join Now
Telegram Group Join Now

ಗದಗ ಸೆಪ್ಟೆಂಬರ್ 24: “2024-25ನೇ ಸಾಲಿನ ಸರಕಾರಿ ಪ್ರಾಥಮಿಕ/ ಪ್ರೌಢಶಾಲೆಗಳ ಸಹ ಶಿಕ್ಷಕರು/ಮುಖ್ಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಜಿಲ್ಲೆಯ ಒಳಗಿನ ಪ್ರಾಥಮಿಕ ಶಾಲಾ ಹಿರಿಯ ಮುಖ್ಯ ಶಿಕ್ಷಕರು/ಮುಖ್ಯ ಶಿಕ್ಷಕರು/ಸಹ ಶಿಕ್ಷಕರು/ದೈಹಿಕ ಶಿಕ್ಷಕರು/ವಿಶೇಷ ಶಿಕ್ಷಕರುಗಳ ವರ್ಗಾವಣೆಯನ್ನು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು/ದೈಹಿಕ ಶಿಕ್ಷಣ ಶಿಕ್ಷಕರು/ ವಿಶೇಷ ಶಿಕ್ಷಕರುಗಳ ಕೋರಿಕೆ ವರ್ಗಾವಣೆ ಕುರಿತಂತೆ ಪರಿಷ್ಕೃತ ವೇಳಾ ಪಟ್ಟಿಯಂತೆ ಅಂತಿಮ ಪಟ್ಟಿ ಪ್ರಕಾರ ಈ ಕೆಳಗಿನ ದಿನಾಂಕಗಳAದು ಕೌನ್ಸಲಿಂಗ್ ನಡೆಸಲಾಗುವುದು. ಸಂಬAಧಿಸಿದ ಶಿಕ್ಷಕರು ನಿಗದಿ ಪಡಿಸಿದ ದಿನಾಂಕದAದು ಕೌನ್ಸಲಿಂಗ್ ಸಮಯದಲ್ಲಿ ಹಾಜರಿರಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೌನ್ಸಿಲಿಂಗ್ ನಡೆಯುವ ಸ್ಥಳ ಸರಕಾರಿ ಪ್ರೌಢಶಾಲೆ ಸಿದ್ಧಲಿಂಗನಗರ, ಹುಡ್ಕೋ ಕಾಲೋನಿ, ಗದಗ ಆಗಿದ್ದು ಕೌನ್ಸಿಲಿಂಗ್ ನ ಸಮಯ ಬೆ 9.30 ರಿಂದ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 25 ರಂದು ಅಂತಿಮ ಪಟ್ಟಿಯಲ್ಲಿರುವ ಎಲ್ಲಾ ಪ್ರಾಥಮಿಕ ಹಿರಿಯ ಮುಖ್ಯ ಶಿಕ್ಷಕರು/ ಮುಖ್ಯಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ಸಹಶಿಕ್ಷಕರ ವೃಂದ ಕ್ರ.ಸಂ 1 ರಿಂದ 450 ವರೆಗೆ, ಸೆಪ್ಟೆಂಬರ್ 26 ರಂದು ಪ್ರಾಥಮಿಕ ಶಾಲಾ ಸಹಶಿಕ್ಷಕರ ವೃಂದ ಕ್ರ.ಸಂ 451 ರಿಂದ ಮುಕ್ತಾಯವಾಗುವವರೆಗೆ ಹಾಗೂ ಪ್ರಾಥಮಿಕ ದೈಹಿಕ ಶಿಕ್ಷಕರು/ ವಿಶೇಷ ಶಿಕ್ಷಕರು, ಸೆಪ್ಟೆಂಬರ್ 29 ರಂದು ಅಂತಿಮ ಪಟ್ಟಿಯಲ್ಲಿರುವ ಎಲ್ಲಾ ಪ್ರೌಢ ಶಾಲಾ ವಿಶೇಷ ಶಿಕ್ಷಕರು/ದೈಹಿಕ ಶಿಕ್ಷಕರು/ಸಹಶಿಕ್ಷಕರ ವೃಂದ ದವರು ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 24: ಅಕ್ಟೋಬರ್ 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಆಡಿಟೋರಿಯಂ ಹಾಲ್‌ದಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ಪೂರ್ವಭಾವಿ ಸಭೆಗೆ ಎಲ್ಲಜಿಲ್ಲಾ ಮಟ್ಟದ ಅಧಿಕಾರಿಗಳು, ಗದಗ ತಾಲೂಕು ಮಟ್ಟದ ಅಧಿಕಾರಿಗಳು, ಶ್ರೀ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ / ಪರಿಶಿಷ್ಟ ಜಾತಿ / ಹಿಂದುಳಿದ ವರ್ಗ/ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಶ್ರಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article