ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ  ಕೃಷ್ಣಂ ಪ್ರಣಯ ಸಖಿ  ದ್ವಾಪರ ದಾಟುತ..  ಹಾಡು ಬಿಡುಗಡೆ 

Ravi Talawar
ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ  ಕೃಷ್ಣಂ ಪ್ರಣಯ ಸಖಿ  ದ್ವಾಪರ ದಾಟುತ..  ಹಾಡು ಬಿಡುಗಡೆ 
WhatsApp Group Join Now
Telegram Group Join Now
     ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ. ಡಾ. ವಿ ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ದ್ವಾಪರ ದಾಟುತ’ ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
     ಸರಿಗಮಪ ಖ್ಯಾತಿಯ ಜಸ್ಕರಣ್ ಸಿಂಗ್ ಈ ಹಾಡನ್ನು ಇಂಪಾಗಿ ಹಾಡಿದ್ದಾರೆ. ಹಾಡುಗಳ ಮೂಲಕ ಈಗಾಗಲೇ ಗೆದ್ದಿರುವ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರಲಿದೆ.
     ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
     ಕೃಷ್ಣಂ ಪ್ರಣಯ ಸಖಿ’ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರ ತಾರಾಬಳವಿದೆ.
WhatsApp Group Join Now
Telegram Group Join Now
Share This Article