ಮಂಗಳೂರು, ಡಿಸೆಂಬರ್ 19: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್ಸಿ) ಮಾಹಿತಿ ಆಧಾರಿತ ವಿಶ್ವ ಅರೋಗ್ಯ ಸಂಸ್ಥೆಯ ವರದಿ, ಮುಖ್ಯವಾಗಿ ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಆದರೆ, ಇದೀಗ ರಾಜ್ಯದ ಪ್ರತಿಷ್ಠಿತ ವಿವಿಯೊಂದರ ಅಧ್ಯಯನ ವರದಿ ಭಿನ್ನವಾದುದನ್ನೇ ಹೇಳಿದೆ. ನಿಟ್ಟೆ ವಿವಿಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಮಹತ್ವದ ಸಂಶೋಧನೆ ನಡೆಸಿದ್ದು, ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಅಂಶ ಅಡಿಕೆಯಲ್ಲಿದೆ ಎಂದು ತಿಳಿಸಿದೆ.