ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ

Ravi Talawar
ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ
WhatsApp Group Join Now
Telegram Group Join Now

ಬೆಂಗಳೂರು, ಜೂನ್​ 17: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇಲಾಖೆಯೊಂದಿಗೆ ಚರ್ಚೆ ಮಾಡಬೇಕು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಲು ತೈಲ ಬೆಲೆ ಏರಿಕೆ ಮಾಡಿಲ್ಲ. ಬದಲಿಗೆ, ಆರ್ಥಿಕ ಮೂಲಗಳಾದ ಮದ್ಯ ಮತ್ತು ತೈಲದಿಂದ ಹೆಚ್ಚಿನ ಆದಾಯ ಬಂದರೆ, ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಅಂತ ತೈಲ ಬೆಲೆ ಏರಿಕೆ ಮಾಡಿದ್ದೇವೆ ಎಂದು ಹೇಳಿದರು.

ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ‌ ಮೂರು ರೂಪಾಯಿ ಹೆಚ್ಚಿಸಿದ್ದೇವೆ. ಆದರೆ, ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ನಮ್ಮ ಅಕ್ಕ-ಪಕ್ಕದ ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಿದೆ, ನಮ್ಮಲ್ಲಿ ಅಲ್ಲಿಗಿಂತ ದರ ಕಡಿಮೆ ಇದೆ. ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯಗಳಲ್ಲಿ ತೈಲ ಬೆಲೆ ಇಲ್ಲಿಗಿಂತ ಅಧಿಕವಾಗಿದೆ. ಆದರೂ, ಬಿಜೆಪಿ ನಾಯಕರು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಕೇಂದ್ರದ ವಿರುದ್ಧ ಧರಣಿ ಮಾಡಬೇಕು ಎಂದರು.

ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ಇದ್ದಾಗ ಗ್ಯಾಸ್, ತೈಲ ದರ ಹೆಚ್ಚಿಸಿದ ಸಮಯದಲ್ಲಿ ಅಂದು ಗುಜರಾತ್​ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದರೆ ಇವೆಲ್ಲದರ ಬೆಲೆ ಇಳಿಸುತ್ತೇವೆ ಎಂದು ಹೇಳಿದ್ದರು. ಆದರೆ, ಇದೀಗ ಪ್ರಧಾನಿ ಮೋದಿ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

 

WhatsApp Group Join Now
Telegram Group Join Now
Share This Article