ವಿಶ್ವ ಜಲ ದಿನ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಕರೆ ನೀರು ಸಂರಕ್ಷಣೆ ನಮ್ಮೆಲ್ಲರ ಹೊಣೆ

Ravi Talawar
ವಿಶ್ವ ಜಲ ದಿನ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಕರೆ ನೀರು ಸಂರಕ್ಷಣೆ ನಮ್ಮೆಲ್ಲರ ಹೊಣೆ
WhatsApp Group Join Now
Telegram Group Join Now

ಬಳ್ಳಾರಿ,ಮಾ.26: ನಿಸರ್ಗ ಕೊಡುಗೆಯಾದ ನೀರು ಅತ್ಯಮೂಲ್ಯವಾದದ್ದು. ಎಲ್ಲರೂ ಮಿತವಾಗಿ ಬಳಸುವ ಮೂಲಕ ಸಂರಕ್ಷಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ವೀರಶೈವ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವೀರಶೈವ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನ್ನು ನೀಡುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸಹ ನೀಡಿದೆ. ಅದರಲ್ಲಿ ಪರಿಸರ ರಕ್ಷಣೆ ಜೊತೆಗೆ ನೀರು ಸಂರಕ್ಷಣೆಯೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿಯ ಮೂಲಕ ನೀರನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ನೀಡೋಣ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿದೆ. ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಏ.10 ರವರೆಗೆ ತುಂಗಭದ್ರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಯಲಿದ್ದು, ಕೃಷಿ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕಾಗುತ್ತದೆ. ಹಾಗಾಗಿ ನೀರನ್ನು ಮಿತವಾಗಿ ಬಳಸಲು ಸೂಚಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಸಕಲ ಜೀವರಾಶಿಗಳಿಗೆ ನೀರು ಬಹುಮುಖ್ಯವಾಗಿದೆ. ಭೂ ಮಂಡಲದಲ್ಲಿ ಇರುವ ನೀರಿನ ಪ್ರಮಾಣದಲ್ಲಿ ಶೇ.97ರಷ್ಟು ಉಪ್ಪು ನೀರು ಇದ್ದು, ಶೇ3.ರಷ್ಟು ಮಾತ್ರ ಸಿಹಿ ನೀರು ಬಳಕೆಗೆ ಉಪಯುಕ್ತವಾಗಿದೆ. ಇದರಲ್ಲಿ ಕೇವಲ ಶೇ.0.07ರಷ್ಟು ನೀರು ಕುಡಿಯಲು ಬಳಕೆಯಾಗುತ್ತಿದೆ. ಉಳಿದ ನೀರು ಘನ ರೂಪದಿ ಹಿಮಪಾತಗಳಲ್ಲಿದೆ ಎಂದು ಅವರು ಹೇಳಿದರು.
ಬೇಸಿಗೆ ಬಂತೆAದರೇ ಕುಡಿಯುವ ನೀರಿನ ಬರ ಎದುರಾಗಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ನೀರನ್ನು ಅತಿಯಾಗಿ ಪೋಲು ಮಾಡದೆ ಅಗತ್ಯವಿರುವಷ್ಟು ಮಾತ್ರ ಬಳಸಬೇಕು ಎಂದು ತಿಳಿಸಿದರು.
ಭೂಮಿಯ ಮೇಲೆ ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ. ಎಲ್ಲಾ ಜೀವಿಗಳಿಗೂ ನೀರು ಅತ್ಯವಶ್ಯಕವಾಗಿದೆ. ಸಮುದ್ರಗಳು ಕಡಲತೀರ ಕೊರೆದು ಭೂಮಿಯನ್ನು ಅತಿಕ್ರಮಿಸುತ್ತಿವೆ. ಪ್ರಸ್ತುತದಲ್ಲಿ ಸಣ್ಣ-ಸಣ್ಣ ನದಿ, ಹಳ್ಳಗಳು ಕಣ್ಮರೆಯಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರಸ್ತುತದಲ್ಲಿ ಕಾರ್ಖಾನೆಗಳಿಂದ ವಾಯು ಮಾಲಿನ್ಯ ಉಂಟಾಗಿ ಓಜೋನ್ ಪದರಿಗೆ ರಂಧ್ರಗಳು ಬಿದ್ದು ಸೂರ್ಯನ ಶಾಖದಿಂದ ಹಲವಾರು ಪರಿಣಾಮ ಬೀರುತ್ತಿದೆ. ಗಿಡ ಮರಗಳನ್ನು ಬೆಳೆಸಬೇಕು. ಪ್ರಕೃತಿ ಸಂರಕ್ಷಣೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರಗಳು ಕೆರೆ-ನದಿಗಳನ್ನು ಸಂರಕ್ಷಿಸಲು ಹಲವಾರು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ. ತಮ್ಮ ಮನೆಯ ಅಕ್ಕ-ಪಕ್ಕದಲ್ಲಿ ನೀರು ಪೋಲಾಗುವುದು ಕಂಡುಬAದಲ್ಲಿ ಅದನ್ನು ನಿಲ್ಲಿಸುವ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವ ಜಲ ದಿನ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಇಂದುಧರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೈ.ರಾಮಚಂದ್ರ, ರವೀಂದ್ರ ನಾಯ್ಕ, ವೀರಶೈವ ಮಹಾವಿದ್ಯಾಲಯದ ಅಧ್ಯಕ್ಷ ದರೂರು ಶಾಂತನಗೌಡ, ಸದಸ್ಯ ಖಾರದಪುಡಿ ಮುದ್ದನಗೌಡ, ಕಾಲೇಜಿನ ಪ್ರಾಚಾರ್ಯ ಜಿ.ಮಲ್ಲನಗೌಡ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article