ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಭೇಟಿ; ಪರಿಶೀಲನೆ

Ravi Talawar
ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಭೇಟಿ; ಪರಿಶೀಲನೆ
WhatsApp Group Join Now
Telegram Group Join Now

ಬಳ್ಳಾರಿ,ಮೇ 17: ಕುರುಗೋಡು ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಿದ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದ ವಿ.ಟಿ.ಕ್ಯಾಂಪ್‍ನಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದರು. ಸಿಂಧಿಗೇರಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಅರಣ್ಯ ಇಲಾಖೆಯಿಂದ ಪ್ರಗತಿ ಹಂತದ ಟ್ರಂಚ್ ಕಾಮಗಾರಿ ಪರಿಶೀಲಿಸಿದರು.

ಬಳಿಕ ಹೆಚ್.ವೀರಾಪುರ ಹಾಗೂ ಸೋಮಲಾಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರ ಕಾರ್ಯನಿರ್ವಹಿಸುವ ಬದು ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು.

ಈ ವೇಳೆ ಕುರುಗೋಡು ತಾಲ್ಲೂಕಿನ ತಾಪಂ ಇಒ ಕೆ.ವಿ.ನಿರ್ಮಲ ಸೇರಿದಂತೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕರು, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಟಿಸಿ, ಟಿಐಇಸಿ, ಟಿಎಂಐಎಸ್, ಪಿಡಿಒ, ಟಿಎಇ, ಡಿಇಓ, ಬಿಎಫ್‍ಟಿ, ಗ್ರಾಮ ಕಾಯಕ ಮಿತ್ರರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

 

WhatsApp Group Join Now
Telegram Group Join Now
Share This Article