ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ: ಹೈಕೋರ್ಟ್​ಗೆ ಎಜಿ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ

Ravi Talawar
ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ: ಹೈಕೋರ್ಟ್​ಗೆ ಎಜಿ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 11: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯನ್ನಾಗಿ ಬದಲಾಯಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಕಾರಣಾಂತರಗಳಿಂದ ಮುಂದೂಡುತ್ತಾ ಬರಲಾಗಿತ್ತು. ಆದರೆ ಇದೀಗ ಈ ವರ್ಷ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ ಎಂದು ಹೈಕೋರ್ಟ್​ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಬಿಬಿಎಂಪಿ ಕಟ್ಟಡ ಬೈಲಾ ಉಲ್ಲಂಘನೆ ವಿಚಾರವಾಗಿ ನಡೆದ ವಿಚಾರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಯಾವಾಗ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಈ ವೇಳೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಐದು ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ. ಹಾಗಾಗಿ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮುಂದೂಡಲಾಗಿದೆ ಎಂದು ಹೈಕೋರ್ಟ್​ಗೆ ಎಜಿ ಸ್ಪಷ್ಟನೆ ನೀಡಿದ್ದಾರೆ
WhatsApp Group Join Now
Telegram Group Join Now
Share This Article