ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ಹೊಸ ಪಾಲಿಕೆಗಳ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳಿಗೆ ಅನ್ವಯವಾಗುವಂತೆ ಕಾರ್ಯ ನಿರ್ವಹಿಸುವ ಅಧಿಕಾರಿ, ನೌಕರರ ಹುದ್ದೆಯನುಸಾರ ಇ-ಆಫೀಸ್ ತಂತ್ರಾಂಶದಲ್ಲಿ ಹೊಸದಾಗಿ ಲಾಗಿನ್ ನೀಡಲಾಗಿದ್ದು. ಲಾಗಿನ್ ಮ್ಯಾಪಿಂಗ್ ಕಾರ್ಯವು ಪ್ರಗತಿಯಲ್ಲಿದೆ.
ಬಿಬಿಎಂಪಿ ಇ-ಆಫೀಸ್ ಲಾಗಿನ್‌ನಲ್ಲಿರುವ ಕಡತ, ಪತ್ರಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗೆ ಸೃಜಿಸಲಾಗಿರುವ ಇ-ಆಫೀಸ್ ಲಾಗಿನ್‌ಗೆ ಕಳುಹಿಸಿಕೊಂಡು ವಿಲೇವಾರಿ ಮಾಡಲು ಆದೇಶಿಸಲಾಗಿದೆ. ನಗರದ ಯೋಜನೆ, ಕಾರ್ಯಕ್ರಮಗಳು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಸೂಚಿಸಿದ್ದಾರೆ.