ಬೆಂಗಳೂರು, ಮಾರ್ಚ್ 12: ಬೆಂಗಳೂರಿನಲ್ಲಿ (Bengaluru) ಆಟೋ ಪ್ರಯಾಣ ದರ (Auto Fare Hike) ಹೆಚ್ಚಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ. ಹೀಗಾಗಿ ಆಟೋ ದರ ಏರಿಕೆ ಬಹುತೇಕ ದೃಢಪಟ್ಟಂತಾಗಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ದರ ಪರಿಷ್ಕರಣೆಗೆ ಸಮ್ಮತಿಸಲಾಗಿದೆ.
ಬಹುತೇಕ ಎಲ್ಲಾ ಆಟೋ ಚಾಲಕ ಸಂಘಟನೆಗಳು ದರ ಏರಿಕೆಗೆ ಸಮ್ಮತಿ ಸೂಚಿಸಿವೆ. ಒಂದು ವಾರkದ ವರೆಗೆ ಆಟೋ ಚಾಲಕ ಸಂಘಟನೆಗಳ ಅಭಿಪ್ರಾಯಕ್ಕೆ ಅವಕಾಶ ನೀಡಲಾಗಿದೆ. ಚಾಲಕ ಸಂಘಟನೆಗಳು ಸಭೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ವರದಿ ಸಲ್ಲಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳು ಎಷ್ಟು ದರ ಏರಿಕೆ ಮಾಡಬೇಕೆಂದು ಘೋಷಣೆ ಮಾಡಲಿದ್ದಾರೆ.