ನವದೆಹಲಿ, ಆಗಸ್ಟ್ 04: ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಹೊಸ ಜಿಎಸ್ಟಿ ದರಗಳ ಕುರಿತು ತೆಗೆದುಕೊಂಡ ನಿರ್ಧಾರಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಣಕಾಸು ಸಚಿವಾಲಯವನ್ನು ಶ್ಲಾಘಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಜಿಎಸ್ಟಿಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ನಮ್ಮ ಉದ್ದೇಶದ ಬಗ್ಗೆ ಮಾತನಾಡಿದ್ದೆ. ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸುವುದು ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದು ಮೋದಿ ಹೇಳಿದ್ದಾರೆ.
ರೈತರು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು ಈ ಸುಧಾರಣೆಗಳಿಂದ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಿದರು. ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಿಗಳು ವ್ಯಾಪಾರ ಮಾಡುವುದು ಸುಲಭವಾಗುತ್ತದೆ ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ. ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸುವುದು ಮತ್ತು ಸಣ್ಣ ವ್ಯವಹಾರಗಳಿಗೆ ವ್ಯಾಪಾರ ವಾತಾವರಣವನ್ನು ಸುಧಾರಿಸುವುದು ಈ ಸುಧಾರಣೆಗಳ ಉದ್ದೇಶವಾಗಿದೆ.
ಇದು ತೆರಿಗೆ ಹೊರೆಯನ್ನು ಗಮರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಸಣ್ಣ ಕೈಗಾರಿಕೆಗಳಿಗೆ ಪ್ರಯೋಜನವಾಗುತ್ತದೆ. ಮುಂದಿನ ಪೀಳಿಗೆಯ ಸುಧಾರಣೆಗಳು ಮತ್ತು ಜಿಎಸ್ಟಿ ಕಾನೂನುಗಳಿಗೆ ತಿದ್ದುಪಡಿಗಳಿಗಾಗಿ ಕಾರ್ಯಪಡೆ ರಚನೆಯನ್ನು ಪ್ರಧಾನಿ ಮೋದಿ ಘೋಷಿಸಿದ್ದರು. ಸ್ವಾತಂತ್ರ್ಯ ದಿನದಂದು ಅವರು ತಮ್ಮ 103 ನಿಮಿಷಗಳ ಭಾಷಣದ ಬಹುಪಾಲು ಭಾಗವನ್ನು ಸೆಮಿಕಂಡಕ್ಟರ್ಗಳಿಂದ ರಸಗೊಬ್ಬರಗಳವರೆಗೆ ಅನೇಕ ಕ್ಷೇತ್ರಗಳಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವತ್ತ ಕೇಂದ್ರೀಕರಿಸಿದ್ದರು.