ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಕೈಕೊಟ್ಟ ‘ಗ್ಯಾರಂಟಿ’!

Ravi Talawar
ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಕೈಕೊಟ್ಟ ‘ಗ್ಯಾರಂಟಿ’!
WhatsApp Group Join Now
Telegram Group Join Now

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯ ಮತ ಎಣಿಕೆಪ್ರಗತಿಯಲ್ಲಿದ್ದು, ಫಲಿತಾಂಶ ಬಹುತೇಕ ನಿಕ್ಕಿಯಾಗುತ್ತಿದೆ. ಈ ಮಧ್ಯೆ ಕರ್ನಾಟಕ  ಮತ್ತು ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳು  ‘ಕೈ’ಹಿಡಿಯಬಹುದು ಎಂದು ಭಾವಿಸಿದ್ದ ಆಡಳಿತಾರೂಢ ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ.

ಕರ್ನಾಟಕದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್​​ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಸಹ ಕಾಂಗ್ರೆಸ್ ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆಯಲ್ಲದೆ. ಇತರರು 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ಕರ್ನಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ವಿರುದ್ಧ ಸುಮಾರು 1 ಲಕ್ಷ ಮತಗಳ ಹಿನ್ನಡೆಯಲ್ಲಿದ್ದಾರೆ. ಸ್ವತಃ ಡಿಸಿಎಂ ಸಹೋದರನೇ ಸೋಲಿನತ್ತ ಸಾಗಿರುವುದು ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಗಿದೆ.

 

WhatsApp Group Join Now
Telegram Group Join Now
Share This Article