ಬಳ್ಳಾರಿ ಏಪ್ರಿಲ್ 16.. : ಭಾರತೀಯ ಜನತಾ ಪಕ್ಷದ ಬಳ್ಳಾರಿ ಜಿಲ್ಲೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಬಿಜೆಪಿಯ ನಿಷ್ಠಾವಂತ ಮಹಿಳಾ ಕಾರ್ಯಕರ್ತರಾದ ಹಂಪಿ ರಮಣ ಅವರನ್ನು ಎರಡನೇ ಬಾರಿಗೆ ನೇಮಕ ಮಾಡಲಾಗಿದೆ. ಈ ಕುರಿತು ಅವರು ಇಂದು ಮಾಧ್ಯಮ ಗಾರರ ಜೊತೆ ಮಾತನಾಡಿ, ಭಾರತೀಯ ಜನತಾ ಪಕ್ಷ ನನ್ನ ಪಕ್ಷ ನಿಷ್ಠೆ ಮತ್ತು ಸೇವೆಯನ್ನು ಪರಿಗಣಿಸಿ ನನಗೆ ಬಳ್ಳಾರಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಎರಡನೇ ಬಾರಿಗೆ ನೇಮಕ ಮಾಡಿದೆ ಮತ್ತು ಅತ್ಯಂತ ಮುಖ್ಯವಾಗಿ ಈ ನೇಮಕಕ್ಕೆ ಕಾರಣರಾದ ಮಾಜಿ ಸಚಿವ ಬಿ ಶ್ರೀರಾಮುಲು ಜಿ ಜನಾರ್ದನ ರೆಡ್ಡಿ ಶಾಸಕರಾದ ಸೋಮಶೇಖರ ರೆಡ್ಡಿ, ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಹಾಗೂ ಪಕ್ಷದ ಮಹಿಳಾ ಮುಖಂಡರಾದ ಲಕ್ಷ್ಮಿ ಅರುಣ ಅವರಿಗೆ ನಾನು ಅತ್ಯಂತ ಕೃತಜ್ಞಳಾಗಿದ್ದೇನೆ ಅವರಿಗೆ ನನ್ನ ಅನಂತಾನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಭಾರತೀಯ ಜನತಾ ಪಕ್ಷ ಮತ್ತು ಪಕ್ಷದ ಉನ್ನತ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಪಕ್ಷದ ಸಂಘಟನೆಯ ಮೂಲಕ ಹಾಗೂ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿ ಅವರ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದು ನೂತನ ಮಹಿಳಾ ಜಿಲ್ಲಾಧ್ಯಕ್ಷೆ ಹಂಪಿ ರಮಣ ತಿಳಿಸಿದರು.
ಈ ಸಂದರ್ಭದಲ್ಲಿ ಅಪೂರ್ವ ಸುಗುಣ ಸಾಧನ ಹಿರೇಮಠ ಸೇರಿದಂತೆ ಇತರರಿದ್ದರು.


