ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ರೋಹ್ಟಕ್‌ನಲ್ಲಿ ಕೊಲೆಯಾಗಿದ್ದರು. ಸಚಿನ್ ಎನ್ನುವಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ರೋಹ್ಟಕ್‌ನ ಬಸ್ ನಿಲ್ದಾಣದ ಬಳಿ ಶನಿವಾರ ಹಿಮಾನಿ ನರ್ವಾಲ್‌ರ ಶವ ಪತ್ತೆಯಾಗಿತ್ತು. ಮೊಬೈಲ್ ಫೋನ್ ಚಾರ್ಜಿಂಗ್ ವೈರ್‍ನಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಬಸ್ ಸ್ಟಾಂಡ್ ಬಳಿ ಬಿಸಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ವಿಡಿಯೋದಲ್ಲಿ ಆರೋಪಿಗಳು ಮಹಿಳೆಯ ಮನೆಯ ಹತ್ತಿರದ ಬೀದಿಯಲ್ಲಿ ಸೂಟ್‌ಕೇಸ್ ಎಳೆದುಕೊಂಡು ನಡೆದುಕೊಂಡು ಹೋಗುತ್ತಿರುವುದನ್ನು ನೋಡಬಹುದು. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದೇನು? ಆರೋಪಿ ಸಚಿನ್ ಕೊಲೆಯಾಗಿರುವ ಹಿಮಾನಿ ನರ್ವಾಲ್ ಅವರ ಸ್ನೇಹಿತ ಎಂದು ಹೇಳಿದ್ದಾರೆ. ಹಣಕ್ಕಾಗಿ ಜಗಳ ನಡೆದಿದ್ದು ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸೋಮವಾರ ಮುಂಜಾನೆ ಪೊಲೀಸರು ಆರೋಪಿಯವನ್ನು ಬಂಧಿಸಿದ್ದಾರೆ.