ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆ: ಹೆಚ್​ಡಿ ಕುಮಾರಸ್ವಾಮಿ ಕಿಡಿ

Ravi Talawar
ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆ: ಹೆಚ್​ಡಿ ಕುಮಾರಸ್ವಾಮಿ ಕಿಡಿ
WhatsApp Group Join Now
Telegram Group Join Now

ಬೆಂಗಳೂರು,16: ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತ ಪಡಿಸಿರುವ ಅವರು, ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ ಎಂದಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ.

ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ.

ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಅದು ಸಿಗುತ್ತಿಲ್ಲ. ಕಾರಣ ಅವರು ಸಾಲ ಮಾಡಿರುವುದು. ಬ್ಯಾಂಕ್​ಗಳು ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ರಾಜ್ಯ ಹಲವು ಕಡೆಗಳಿಂದ ವರದಿಯಾಗಿದೆ. ಅನೇಕ ರೈತರಿಗೆ ದೊರೆಯಬೇಕಿದ್ದ ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆಯಾಗುತ್ತಿದೆ. ಎಂದು ಕಿಡಿಕಾರಿದ್ದಾರೆ.

 

WhatsApp Group Join Now
Telegram Group Join Now
Share This Article