ಬೆಂಗಳೂರು, ಮೇ 05: ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರಿಗೆ ಕೋರ್ಟ್ ಐದು ದಿನ ಎಸ್ಐಟಿ ಕಸ್ಟಡಿಗೆ ನೀಡಿದೆ.
ನಿನ್ನೆ (ಮೇ 04) ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಎಚ್ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಪದ್ಮನಾಭನಗರ ನಿವಾಸಕ್ಕೆ ತೆರಳಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಎಸ್ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ವಿಚಾರಣೆ ಮಾಡಿದ್ದು, ಇದೀಗ ಇಂದು (ಮೇ 05) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯ್ತು. ಇವತ್ತು ಭಾನುವಾರ ಆಗಿದ್ದರಿಂದ ಕೋರಮಂಗದಲ್ಲಿರುವ ನಿವಾಸದಲ್ಲೇ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಮುಂದೆ ಹಾಜರುಪಡಿಸಿದರು.
ಈ ವೇಳೆ ನ್ಯಾಯಾಧೀಶರು ಆರೋಪ ರೇವಣ್ಣ ಅವರನ್ನು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಪ್ರತಿ ದಿನ 9.30 ರಿಂದ 10.30 ರ ವರೆಗೂ ಲಾಯರ್ ಬೇಟಿಗೆ ಅವಕಾಶ ನೀಡಲಾಗಿದೆ. ಹಾಗೆ ಉತ್ತಮ ಆಹಾರ ವ್ಯವಸ್ಥೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.