ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದು, ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವನ್ನು ರತ್ನಾಕರ್ ಎಂಬಾತ ಕೊಲೆ ಮಾಡಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ಸಿಂಧು ಅವರ ಪತಿ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದೆ. ನಾಡ ಬಂದೂಕಿನಿಂದ ಮೂವರನ್ನು ಈ ರತ್ನಾಕರ್ ಹತ್ಯೆ ಮಾಡಿದ್ದಾನೆ. ಈ ಮೂವರನ್ನು ಕೊಲೆ ಮಾಡಿದ ಬಳಿಕ ರತ್ನಾಕರ್ ತೋಟಕ್ಕೆ ತೆರಳಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಲಹ ಇವರ ಮಧ್ಯೆ ನಡೆಯುತ್ತಿತ್ತು. ಇದರಿಂದ ಬೇಸತ್ತು ರತ್ನಾಕರ್, ಈ ಕೃತ್ಯ ಎಸಗಿದ್ದು ಮೂವರು ಸಂಬಂಧಿಕರನ್ನು ಕೊಂದು ನಂತರ ತಾನು ಸಾವಿಗೆ ಶರಣಾಗಿದ್ದಾನೆ ಎಂದು ಎಸ್ಪಿ ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ.