ಬೆಂಗಳೂರು: ಮೇ 17ರಿಂದ ಎರಡು ದಿನಗಳವರೆಗೆ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಎರಡು ದಿನಗಳವರೆಗೆ ರಾಜ್ಯಕ್ಕೆ ಭಾರಿ ಮಳೆ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಕ್ಕೆ ಈ ಬಾರಿ ವಾಡಿಕೆಗಿಂತ ಮುನ್ನವೇ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈ ಬಾರಿ ಮೇ 28ಕ್ಕೆ ಜೇಷ್ಠ ಮಾಸ ಶುರುವಾಗಲಿದ್ದು, ಅದೇ ದಿನ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಮಾರುತಗಳು ಬಲವಾಗಿದ್ದರೆ, ಅದೇ ದಿನ ಕರ್ನಾಟಕದ ಕರಾವಳಿ ಭಾಗಕ್ಕೂ ಪ್ರವೇಶಿಸಲಿದೆ. ಮಾರುತಗಳು ದುರ್ಬಲವಾಗಿದ್ದರೆ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.