ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.
ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.