ಬೆಂಗಳೂರ: ಮುಂದಿನ ಐದು ದಿನಗಳ ಕಾಲ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಪಣಂಬೂರು, ಭಾಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.