ಬೆಂಗಳೂರು, ಏಪ್ರಿಲ್ 25: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ. ಎಚ್ಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.