ಬೆಂಗಳೂರು: : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಮಂಗಳವಾರ ಅಂದರೆ ಇಂದು ರಜೆ ಘೋಷಿಸಿಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ: ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಡಿಸಿ ಆದೇಶ: ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.