ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಗುಜರಾತ್, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ ಮತ್ತು ಕರಾವಳಿ ಆಂಧ್ರಪ್ರದೇಶಕ್ಕೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜಸ್ಥಾನ, ಪಂಜಾಬ್, ನವದೆಹಲಿ-ಎನ್‌ಸಿಆರ್, ಕರ್ನಾಟಕ, ಕೇರಳ, ತೆಲಂಗಾಣ, ಪಶ್ಚಿಮ ಮಧ್ಯಪ್ರದೇಶ, ಉತ್ತರಾಖಂಡಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಗುಜರಾತ್, ಕರಾವಳಿ ಕರ್ನಾಟಕ, ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದೆ ಮಳೆಯಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಮುಂಜಾಗ್ರತಾ ಕ್ರಮವಾಗಿ ಭೂಕುಸಿತದ ಭೀತಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 5 ಮತ್ತು 707, ಇತರೆ 78 ರಸ್ತೆಗಳನ್ನು ಮುಚ್ಚಲಾಗಿದೆ. ಇನ್ನು ಮಹಾರಾಷ್ಟ್ರದ ಮರಾಠವಾಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತೆಲಂಗಾಣ, ರಾಜಸ್ಥಾನ, ಗುಜರಾತ್ ಮತ್ತು ನವದೆಹಲಿಯಲ್ಲಿ ಸಾಧಾರಣ ಮಳೆಯಾಗುತ್ತಿದೆ.