ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ

Ravi Talawar
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿಯಲ್ಲಿ ಕೊಂಚ ಮಳೆ ಕೊಂಚ ಬಿಡುವು ಕೊಟ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಹೊನ್ನಾವರ, ಮಂಕಿ, ಕೊಲ್ಲೂರು, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಕಾರವಾರ, ಭಾಗಮಂಡಲ, ಗೇರುಸೊಪ್ಪ, ಮೂಲ್ಕಿ, ಮಂಗಳೂರು, ಸುಳ್ಯ, ಕದ್ರಾ, ಪಣಂಬೂರು, ಬಂಡೀಪುರ, ಕಮ್ಮರಡಿ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಇಂದು ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

 

WhatsApp Group Join Now
Telegram Group Join Now
Share This Article