ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೆದಾರ್, ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.