ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ವಿವರಗಳನ್ನು ಪ್ರಕಟಿಸಬೇಡಿ: ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ

Ravi Talawar
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ವಿವರಗಳನ್ನು ಪ್ರಕಟಿಸಬೇಡಿ: ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ
WhatsApp Group Join Now
Telegram Group Join Now

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ 3,991 ಪುಟಗಳ ವಿವರವಾದ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಂದಿವೆ.

ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ. ಮುಂದಿನ ವಿಚಾರಣೆಯವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ.

ಪ್ರಕರಣವು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಮೊಕದ್ದಮೆಗೆ ಆಗಸ್ಟ್ 27 ರಂದು ಕೆಳ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ, ಮಾಧ್ಯಮಗಳು ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುವುದನ್ನು ಮುಂದುವರಿಸಿವೆ ಎಂದು ಹೈಕೋರ್ಟ್ ಗಮನಿಸಿದೆ.

WhatsApp Group Join Now
Telegram Group Join Now
Share This Article