ಕಾಮಗಾರಿ ಗುತ್ತಿಗೆ ಅಸ್ತಿತ್ವದಲ್ಲಿದ್ದರೆ ಗ್ರಾಮ ಪಂಚಾಯತಿ ಸದಸ್ಯತ್ವ ರದ್ದು: ಹೈಕೋರ್ಟ್ ಆದೇಶ

Ravi Talawar
ಕಾಮಗಾರಿ ಗುತ್ತಿಗೆ ಅಸ್ತಿತ್ವದಲ್ಲಿದ್ದರೆ ಗ್ರಾಮ ಪಂಚಾಯತಿ ಸದಸ್ಯತ್ವ ರದ್ದು: ಹೈಕೋರ್ಟ್ ಆದೇಶ
WhatsApp Group Join Now
Telegram Group Join Now

ಬೆಂಗಳೂರು,11: ಗ್ರಾಮ ಪಂಚಾಯತಿ ಸದಸ್ಯರು ಪಂಚಾಯತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಅಸ್ತಿತ್ವದಲ್ಲಿದ್ದರೆ ಮಾತ್ರ ಅವರ ಸದಸ್ಯತ್ವ ರದ್ದುಪಡಿಸಲು ಕಾರಣವಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬೀರುಹಳ್ಳಿ ಗ್ರಾಮ ಪಂಚಾಯತಿಯ ಗುತ್ತಿಗೆ ಕಾಮಗಾರಿ ಕೆಲಸ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಅದೇ ಗ್ರಾಪಂ ಸದಸ್ಯ ಬಿ.ಎನ್.ಕುಮಾರ್ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಅದೇ ಗ್ರಾಮದ ನಿವಾಸಿ ಬಿ.ಟಿ. ಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಸ್. ಸುನೀಲ್ ದತ್ತ ಯಾದವ್ ಅವರ ಪೀಠ ಆದೇಶಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ- 1993ರ ಸೆಕ್ಷನ್ 12 (ಹೆಚ್) ಪ್ರಕಾರ ಗ್ರಾ.ಪಂ ಸದಸ್ಯರು, ಅವರ ಪಂಚಾಯತಿಗೆ ಸೇರಿದ ಕಾಮಗಾರಿಗಳು ಗುತ್ತಿಗೆ ಪಡೆದು, ಆ ಗುತ್ತಿಗೆ ಒಪ್ಪಂದ ಅಸ್ತಿತ್ವದಲ್ಲಿ ಇದ್ದರೆ ಮಾತ್ರ ಸದಸ್ಯತ್ವ ಅನರ್ಹಗೊಳಿಸಲು ಕಾರಣವಾಗುವುದು. ಅದು ಬಿಟ್ಟು ಹಿಂದಿನ ವರ್ಷದ ಕಾಮಗಾರಿಗಳು ಅಂದರೆ ಅವರು ಸದಸ್ಯರಾಗುವ ಮುನ್ನ ಕಾಮಗಾರಿಗಳು ನಡೆಸಿ, ಅದನ್ನು ಪೂರ್ಣಗೊಳಿಸಿದ್ದರೆ, ಅದರ ಆಧಾರದ ಮೇಲೆ ಸದಸ್ಯತ್ವ ರದ್ದುಪಡಿಸಲು ಸಾಧ್ಯವಿಲ್ಲ. ಅಧೀನ ನ್ಯಾಯಾಲಯವು ಸಹ ಇದೇ ವ್ಯಾಖ್ಯಾನ ಮಾಡಿ, ಬಿ.ಎನ್. ಕುಮಾರ್ ಅವರ ಅನರ್ಹತೆ ಕೋರಿ ಅರ್ಜಿದಾರರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ತಿರಸ್ಕರಿಸಿದೆ. ಹಾಗಾಗಿ, ಅದರ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಕಂಡುಬರುತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
Share This Article